ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆನರಾ ಬ್ಯಾಂಕ್‌ನಲ್ಲಿ 500 ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ ವಿದ್ಯಾರ್ಹತೆ ಜೊತೆಗೆ ಆಗಸ್ಟ್ 1,2023ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 21,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.