ರಜೆ ರದ್ದುಗೊಳಿಸಿ ತಕ್ಷಣವೇ ಕರ್ತವ್ಯಕ್ಕೆ ಮರಳಿ: ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ ಸರಕಾರ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಈ ಬೆನ್ನಲ್ಲೇ ಆರೋಗ್ಯ ಇಲಾಖೆಯ ಎಲ್ಲಾ ನೌಕರರ ಎಲ್ಲಾ ರಜೆಯನ್ನು ರದ್ದುಗೊಳಿಸಿ ಆದೇಶಿಸಿದೆ.

ಮುಂಬರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ಆದೇಶದವರೆಗೆ ವೈದ್ಯಕೀಯ ಕಾರಣಗಳನ್ನು ಹೊರತುಪಡಿಸಿ ಯಾವುದೇ ಅಧಿಕಾರಿಗೆ ಸ್ಟೇಷನ್ ರಜೆ ಸೇರಿದಂತೆ ಯಾವುದೇ ರೀತಿಯ ರಜೆಯನ್ನು ನೀಡಬಾರದು ಎಂಬುದಾಗಿ ಆದೇಶ ಮಾಡಿದೆ.

ಈಗಾಗಲೇ ಮಂಜೂರಾದ ರಜೆಯನ್ನು ರದ್ದುಪಡಿಸಲಾಗಿದೆ ಮತ್ತು ರಜೆಯಲ್ಲಿರುವ ಅಧಿಕಾರಿಗಳಿಗೆ ತಕ್ಷಣ ತಮ್ಮ ಕರ್ತವ್ಯಕ್ಕೆ ಮರಳುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ಆದೇಶದಲ್ಲಿ ನಿರ್ದೇಶಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!