ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ಶೈಕ್ಷಣಿಕ ಶಾಲೆಯಿಂದ ರಾಜ್ಯದಲ್ಲಿಎನ್‌ಇಪಿ ರದ್ದು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಎನ್‌ಇಪಿಯನ್ನು ರಾಜ್ಯದಲ್ಲಿ ಕೈಬಿಡುವಂತೆ ಒತ್ತಾಯಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಈ ವರ್ಷ ತಡವಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‌ಎಪಿ ಸಂಪೂರ್ಣವಾಗಿ ರದ್ದು ಮಾಡಿ ಸಂವಿಧಾನಕ್ಕೆ ಪೂರಕವಾದ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಎನ್‌ಇಪಿ ಜಾರಿಗೆ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಸೇರಿದಂತೆ ಬಹುತೇಕರಿಂದ ವಿರೋಧ ವ್ಯಕ್ತವಾಗಿದೆ. ಬಿಜೆಪಿ ಆಡಳಿತದ ಕೆಲವು ರಾಜ್ಯಗಳಲ್ಲಿಯೂ ಎನ್‌ಇಪಿ ಅನುಷ್ಠಾನಗೊಳಿಸಿಲ್ಲ. ಕರ್ನಾಟಕದಲ್ಲಿ ಮಾತ್ರ ತರಾತುರಿಯಲ್ಲಿ ಎನ್‌ಇಪಿ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.