ಹೊಸದಿಗಂತ ಆನ್ ಲೈನ್ ಡೆಸ್ಕ್:
ಜೂನ್ ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಸಿಬಿಎಸ್ಇ ರೀತಿ ರದ್ದು ಮಾಡುವ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸಿಬಿಎಸ್ಇ ನಿರ್ಧಾರದ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳ ರದ್ದತಿಗೆ ಸಂಬಂಧಿಸಿದಂತೆ ರಾಜ್ಯವು ಏನನ್ನೂ ನಿರ್ಧರಿಸಿಲ್ಲ. ಎಲ್ಲಾ ನಿಯತಾಂಕಗಳನ್ನು ಪರಿಗಣಿಸಿ ಭವಿಷ್ಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಸಚಿವರು ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿರುವ ಸಚಿವರು ‘ಸಿಬಿಎಸ್ಇ ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ ಎಸ್ಎಸ್ಎಲ್ಸಿ ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ.
ನಮ್ಮ ರಾಜ್ಯದ ಎಸ್ಎಸ್ಎಲ್ಸಿ ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು 21.6.2021 ರಿಂದ, ಅಂದರೆ ಜೂನ್ 21 ರಿಂದ. ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್ಇ ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ನಮ್ಮ ರಾಜ್ಯದ SSLC ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು
21.6.2021 ರಿಂದ, ಅಂದರೆ ಜೂನ್ 21 ರಿಂದ.ಆದ್ದರಿಂದ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ.
ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.
— S.Suresh Kumar, Minister – Govt of Karnataka (@nimmasuresh) April 14, 2021
CBSE ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ SSLC ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ.
ನಮ್ಮ ರಾಜ್ಯದ SSLC ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು
21.6.2021 ರಿಂದ, ಅಂದರೆ ಜೂನ್ 21 ರಿಂದ.ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ.
— S.Suresh Kumar, Minister – Govt of Karnataka (@nimmasuresh) April 14, 2021