ಮುಸ್ಲೀಮರಿಗೆ ನೀಡಿದ್ದ 2ಬಿ ಒಳ ಮೀಸಲಾತಿ ರದ್ದು: ವಿಚಾರಣೆ ಮೇ.14ಕ್ಕೆ ಮುಂದೂಡಿದ ಹೈಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಸ್ಲೀಮರಿಗೆ ನೀಡಿದ್ದ 2ಬಿ ಒಳ ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದ್ದು, ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿದೆ. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಾಪೀಠವು ಮೇ.14ಕ್ಕೆ ಮುಂದೂಡಿಕೆ ಮಾಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಿದ್ದ ರಾಜ್ಯ ಸಚಿವ ಸಂಪುಟದ ಕೊನೆಯ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಯನ್ನು ಪರಿಷ್ಕರಿಸುವಂತ ನಿರ್ಧಾರ ಕೈಗೊಳ್ಳಲಾಗಿತ್ತು. ಈ ವೇಳೆ ಅ ಮುಸ್ಲೀಮರಿಗೆ ನೀಡಲಾಗಿದ್ದಂತ 2ಬಿ ಮೀಸಲಾತಿಯನ್ನು ರದ್ದುಗೊಳಿಸಿ EWSನಲ್ಲಿ ಅವಕಾಶ ಕಲ್ಪಿಸಲಾಗಿತ್ತು.

ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮೊಹಮ್ಮದ್ ಆರೀಫ್ ಜಮೀಲ್ ಎಂಬುವರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯಲ್ಲಿ ಕಾನೂನು ಬಾಹಿರವಾಗಿ 2ಬಿ ಮೀಸಲಾತಿ ರದ್ದುಗೊಳಿಸಲಾಗಿದೆ. ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡುವಂತೆಯೂ ಮನವಿ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!