2ಬಿ ಮುಸ್ಲಿಂ ಮೀಸಲಾತಿ ರದ್ದು: ಅರ್ಜಿ ವಿಚಾರಣೆ ಒಂದು ವಾರ ಮುಂದೂಡಿದ ಸುಪ್ರೀಂಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದ 2ಬಿ ಮುಸ್ಲಿಂ ಮೀಸಲಾತಿ (Muslim Reservation) ರದ್ದು ಮಾಡಿದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ (Supreme Court) ಮುಂದಿನ ಮಂಗಳವಾರಕ್ಕೆ ಮುಂದೂಡಿದೆ.

ಇಂದು ಪ್ರಕರಣ ವಿಚಾರಣೆ ಆರಂಭಕ್ಕೂ ಮುನ್ನ ಅರ್ಜಿ ಬಗ್ಗೆ ಪ್ರಸ್ತಾಪಿಸಿದ ತುಷಾರ್ ಮೆಹ್ತಾ, ರಾಜ್ಯ ಸರ್ಕಾರಕ್ಕೆ ಹೆಚ್ಚುವರಿ ಮಾಹಿತಿಯುಳ್ಳ ಅಫಿಡವಿಟ್ ಸಲ್ಲಿಸಲು ಸಾಧ್ಯವಾಗಿಲ್ಲ. ಹೀಗಾಗಿ ಇನ್ನೊಂದು ವಾರ ಸಮಯ ಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿವಾದಿಯಾಗಿದ್ದ ಕಪಿಲ್ ಸಿಬಲ್‌ ಕೂಡಾ ಒಪ್ಪಿಗೆ ಸೂಚಿಸಿದ ಹಿನ್ನಲೆ ವಿಚಾರಣೆಯನ್ನು ಮುಂದೂಡಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!