ಎಸಿಬಿ ರಚನೆ ರದ್ದು: ಬಾಕಿ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾಯಿಸಿ ಹೈಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಸರಕಾರ ರಚನೆ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ನೀಡಿದೆ.

ಈ ಮೂಲಕ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಸ್ವತಂತ್ರವಾಗಿ ಎಸಿಬಿ ತನಿಖೆ ನಡೆಸುವುದಕ್ಕೆ ನ್ಯಾಯಾಲಯ ಕಡಿವಾಣ ಹಾಕಿದ್ದು, ಲೋಕಾಯುಕ್ತ ಸಂಸ್ಥೆ ಅಡಿಯಲ್ಲಿಯೇ ಎಸಿಬಿ ಕಾರ್ಯನಿರ್ವಹಿಸಬೇಕೆಂದು ಆದೇಶದಲ್ಲಿ ತಿಳಿಸಿದೆ.

ಎಸಿಬಿ ರಚನೆ ಪ್ರಶ್ನಿಸಿ ಬೆಂಗಳೂರು ವಕೀಲರ ಸಂಘ, ಸಮಾಜ ಪರಿವರ್ತನ ಸಮುದಾಯ ಸೇರಿದಂತೆ ಹಲವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ನ ವಿಭಾಗೀಯ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ನೇತೃತ್ವದ ವಿಭಾಗೀಯ ಪೀಠದ ಈ ಆದೇಶ ನೀಡಿದೆ.

ಇದೇ ವೇಳೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ರಾಜ್ಯ ಸರ್ಕಾರ ನೀಡಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನೂ ಹೈಕೋರ್ಟ್ ರದ್ದುಪಡಿಸಿದೆ. ನ್ಯಾಯಮೂರ್ತಿಗಳಾದ ಬಿ. ವೀರಪ್ಪ ನೇತೃತ್ವದ ವಿಭಾಗೀಯ ಪೀಠದ ಈ ಆದೇಶ ನೀಡಿದೆ.

ಲೋಕಾಯುಕ್ತಕ್ಕೆ ಪೊಲೀಸ್ ಠಾಣೆ ಸ್ಥಾನಮಾನವನ್ನು ನ್ಯಾಯಾಲಯ ಮರುಸ್ಥಾಪಿಸಿದ್ದು, ಎಸಿಬಿಯು ಲೋಕಾಯುಕ್ತ ಸಂಸ್ಥೆಯ ವ್ಯಾಪ್ತಿಯಲ್ಲಿಯೇ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದೆ.
ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರನ್ನು ಅರ್ಹತೆ ಮೇಲೆ ನೇಮಕ ಮಾಡಬೇಕು ಜಾತಿ ಆಧರಿಸಿ ನೇನಕಕ್ಕೆ ಪರಿಗಣಿಸಬಾರದೆಂದೂ ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!