5- 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದು: ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿದ ಹೈಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್ ‌:

5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದು, ಈ ಬಗ್ಗೆ ಇಂದು ತುರ್ತು ವಿಚಾರಣೆ ನಡೆಸಿದೆ .

ಈ ವೇಳೆ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ಮಾ.14 ಕ್ಕೆ ವಿಚಾರಣೆ ಮುಂದೂಡಿದೆ. ಇದರಿಂದ ಮಾ.13 ರಂದು ನಡೆಯಬೇಕಿದ್ದ 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ.

ಈ ಶೈಕ್ಷಣಿಕ ವರ್ಷದಿಂದ 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿದ್ದು, ಬೋರ್ಡ್ ಎಕ್ಸಂಗೆ ತಡೆ ನೀಡುವ ಮೂಲಕ ಹೈಕೋರ್ಟ್‌ ಶಿಕ್ಷಣ ಇಲಾಖೆಗೆ ಬಿಗ್ ಶಾಕ್ ನೀಡಿತ್ತು.

ಈ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ನಿರ್ಧರಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪಬ್ಲಿಕ್ ಪರೀಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು. 2022-23ನೇ ಸಾಲಿನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ 12 ಡಿಸೆಂಬರ್​ 2022 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಕ್ರಮ ಪ್ರಶ್ನಿಸಿ ರುಪ್ಸಾ ತಕರಾರು ಅರ್ಜಿ ಸಲ್ಲಿಸಿತ್ತು.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!