5- 8 ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು: ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಈ ಸಂಬಂಧ ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಸುತ್ತೋಲೆ ರದ್ದುಪಡಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿ ವಿಚಾರಣೆ ನಾಳೆಗೆ ಮುಂದೂಡಿದೆ.

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ ನೀಡಿದ್ದು, ವಿಚಾರಣೆ ನಾಳೆಗೆ ಮುಂದೂಡಿದೆ.

ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಶಿಕ್ಷಣ ಇಲಾಖೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದು, ಇಂದು ಹೈಕೋರ್ಟ್ ನಲ್ಲಿ ಮೇಲ್ಮನವಿ ವಿಚಾರಣೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!