Monday, September 25, 2023

Latest Posts

ಜೆ.ಪಿ.ನಡ್ಡಾ ವಿರುದ್ಧದ ಎಫ್‍ಐಆರ್ ರದ್ದು: ನಳಿನ್‍ ಕುಮಾರ್ ಕಟೀಲ್ ಸಂತಸ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಅನ್ನು ಕರ್ನಾಟಕ ಹೈಕೋರ್ಟಿನ ಧಾರವಾಡ ಏಕಸದಸ್ಯ ಪೀಠವು ರದ್ದು ಮಾಡಿದೆ.

ಹೈಕೋರ್ಟಿನ ಈ ಕ್ರಮವನ್ನು ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಸ್ವಾಗತಿಸಿದ್ದಾರೆ. ಇದು ನ್ಯಾಯಕ್ಕೆ ಸಂದ ಜಯ ಎಂದು ಅವರು ತಿಳಿಸಿದ್ದಾರೆ.

ಜೆ.ಪಿ.ನಡ್ಡಾ ಅವರ ಪರವಾಗಿ ವಾದ ಮಂಡಿಸಿದ ವಕೀಲರು ಹೈಕೋರ್ಟಿನ ಈ ಕ್ರಮವನ್ನು ಸ್ವಾಗತಿಸಿ ಸಂಭ್ರಮ ವ್ಯಕ್ತಪಡಿಸಿದರು.

ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ಅವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!