ಅರವಿಂದ್‌ ಕೇಜ್ರಿವಾಲ್‌ ಗೆ ಕ್ಯಾನ್ಸರ್‌?: ಸ್ಫೋಟಕ ಮಾಹಿತಿ ನೀಡಿದ ಸಚಿವೆ ಆತಿಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಕ್ಯಾನ್ಸರ್‌ ಇದೇಯೇ ಎಂಬ ಪ್ರಶ್ನೆ ಮೂಡಿದೆ.

ದೆಹಲಿ ಸಚಿವೆ ಆತಿಶಿ (Atishi) ಅವರು ಅರವಿಂದ್‌ ಕೇಜ್ರಿವಾಲ್‌ ಅವರ ಆರೋಗ್ಯದ ಕುರಿತು ಹೊಸ ಮಾಹಿತಿ ನೀಡಿದ್ದು, ಇದರಿಂದ ಜೂನ್‌ 2ರಂದು ದೆಹಲಿ ಸಿಎಂ ಮತ್ತೆ ಜೈಲಿಗೆ ಹೋಗುವುದಿಲ್ಲ ಎಂದು ಹೇಳಲಾಗುತ್ತಿದೆ.

“ಅರವಿಂದ್‌ ಕೇಜ್ರಿವಾಲ್‌ ಅವರ ಆರೋಗ್ಯ ತಪಾಸಣೆ ಮಾಡಿಸಲಾಗಿದ್ದು, ಅವರ ಕೇಟೊನ್‌ ಪ್ರಮಾಣವು ಜಾಸ್ತಿಯಾಗಿದೆ. ಏಕಾಏಕಿ ತೂಕ ಕಡಿಮೆಯಾಗುವುದು, ಜಾಸ್ತಿಯಾಗುವುದನ್ನು ನೋಡಿದರೆ ಅವರಿಗೆ ಗಂಭೀರ ಕಾಯಿಲೆ ಇರುವ ಸಾಧ್ಯತೆ ಇದೆ. ಕಿಡ್ನಿ ಸಮಸ್ಯೆ ಅಥವಾ ಕ್ಯಾನ್ಸರ್‌ ಸೇರಿ ಯಾವುದೇ ಗಂಭೀರ ಕಾಯಿಲೆ ಇರಬಹುದು. ಹಾಗಾಗಿ, ಅರವಿಂದ್‌ ಕೇಜ್ರಿವಾಲ್‌ ಅವರು ಜೂನ್‌ 2ರಂದು ಜೈಲಿಗೆ ಹೋಗುವ ಬದಲು ಜೂನ್‌ 9ರಂದು ತೆರಳುವ ಕುರಿತು ನ್ಯಾಯಾಲಯಕ್ಕೆ ಮನವಿ ಮಾಡಿದೆ. ಅವರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡುವಂತೆ ಕೋರಲಾಗಿದೆ” ಎಂಬುದಾಗಿ ಆತಿಶಿ ತಿಳಿಸಿದ್ದಾರೆ.

ಮಧ್ಯಂತರ ಜಾಮೀನು ಪಡೆದಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಜೂನ್‌ 2ರಂದು ಜೈಲಧಿಕಾರಿಗಳಿಗೆ ಶರಣಾಗಬೇಕಿದೆ. ಇದಕ್ಕೂ ಮೊದಲು ಕೂಡ ಕೇಜ್ರಿವಾಲ್‌ ಅವರ ಆರೋಗ್ಯದ ಬಗ್ಗೆ ಆಪ್‌ ನಾಯಕರು ಕಳವಳ ವ್ಯಕ್ತಪಡಿಸಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!