ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ: ಹೆಚ್​ಡಿಡಿ, ಹೆಚ್​ಡಿಕೆಗೆ ಕರೆ ನೀಡಿದ ದೀದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಲುವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಳೆ (ಬುಧವಾರ) ಪ್ರತಿಪಕ್ಷಗಳ ಸಭೆ ಕರೆದಿದ್ದು, ಈ ಹಿನ್ನೆಲೆ ಹೆಚ್.ಡಿ.ದೇವೇಗೌಡರು ಮತ್ತು ಹೆಚ್.ಡಿ. ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಕ್ಕೂಟದಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲು ಮಮತಾ ಬ್ಯಾನರ್ಜಿ ದೆಹಲಿಯಲ್ಲಿ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು ಹಾಗೂ ನನಗೆ ವೈಯಕ್ತಿಕವಾಗಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಹೀಗಾಗಿ ನಾವಿಬ್ಬರೂ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದಿದ್ದಾರೆ.
ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಪ್ರಾದೇಶಿಕ ಪಕ್ಷಗಳ ಉದ್ದೇಶ. ಈ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ಪ್ರಯತ್ನವನ್ನು ಆರಂಭಿಸಿದ್ದಾರೆ.ಇಪ್ಪತ್ತೆರಡಕ್ಕೂ ಹೆಚ್ಚು ಪಕ್ಷಗಳ ನಾಯಕರನ್ನು ಸಭೆಗೆ ಆಹ್ವಾನಿಸಿದ್ದಾರೆ. ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್​ನಲ್ಲಿ ನಾಳೆ ಮಧ್ಯಾಹ್ನ 3 ಗಂಟೆಗೆ ಈ ಸಭೆ ಕರೆಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!