ಅಭ್ಯರ್ಥಿ ಮತದಾರನಿಗೆ ಪ್ರತಿಯೊಂದು ಆಸ್ತಿಯ ಮಾಹಿತಿ ತಿಳಿಸಬೇಕಾಗಿಲ್ಲ: ಸುಪ್ರೀಂಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿ ಗಳ ಪ್ರತಿಯೊಂದು ಆಸ್ತಿಯನ್ನು ತಿಳಿಯುವ ಹಕ್ಕು ಮತದಾರನಿಗೆ ಇರುವುದಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ಅಭ್ಯರ್ಥಿ ತಮ್ಮ ಖಾಸಗಿತನವನ್ನು ಕಾಪಾಡಿಕೊಳ್ಳುವ ಹಕ್ಕು ಇರುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಅರುಣಾಚಲಪ್ರದೇಶದ ತೇಜು ವಿಧಾನಸಭಾ ಕ್ಷೇತ್ರದಲ್ಲಿ (Tezu assembly constituency) 2019ರ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆದ್ದಿದ್ದ ಕಾರಿಖೋಕ ಕ್ರಿ (Karikho kri) ಅವರ ಶಾಸಕ ಸ್ಥಾನವನ್ನು ಕೋರ್ಟ್ ಎತ್ತಿಹಿಡಿದಿದೆ.

ಸರಿಯಾಗಿ ಆಸ್ತಿ ಘೋಷಣೆ ಮಾಡಿಲ್ಲವೆಂದು ಕಾರಿಖೋ ಕ್ರಿ ಅವರ ಶಾಸಕ ಸ್ಥಾನವನ್ನು ಅಸಿಂಧು ಎಂದು ತೀರ್ಮಾನಿಸಿದ್ದ ಗುವಾಹಟಿ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ.

ಚರಾಸ್ತಿ ಬಹಳ ದೊಡ್ಡ ಮೊತ್ತದ್ದಾಗಿದ್ದರೆ ಮತ್ತು ಐಷಾರಾಮಿ ಜೀವನಶೈಲಿಯನ್ನು ಬಿಂಬಿಸುತ್ತಿದ್ದರೆ ಮಾತ್ರ ಅದನ್ನು ಆಸ್ತಿ ಘೋಷಣೆಯ ಅಫಿಡವಿಟ್​ನಲ್ಲಿ ಸೇರಿಸಬಹುದು. ಇಲ್ಲದಿದ್ದರೆ ಅಭ್ಯರ್ಥಿಗಳು ಪ್ರತಿಯೊಂದು ಚರಾಸ್ತಿಯ ವಿವರವನ್ನು ಬಹಿರಂಗಪಡಿಸುವ ಅಗತ್ಯ ಇಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ತನ್ನ ತೀರ್ಪಿನಲ್ಲಿ ತಿಳಿಸಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸಂಜಯ್ ಕುಮಾರ್ ಅವರಿದ್ದ ಸುಪ್ರೀಂ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸಿದೆ.

ಅರುಣಾಚಲದ ಕಾರಿಖೋ ಕ್ರಿ ಮೇಲಿನ ಆರೋಪ ಏನಿದೆ?
ಕಾರಿಖೋ ಕ್ರಿ ಅವರ ಪತ್ನಿ ಮತ್ತು ಮಗ ಇಬ್ಬರ ಬಳಿ ಮೂರು ವಾಹನಗಳಿವೆ. ಅವನ್ನು ಕ್ರಿ ಅವರು ತಮ್ಮ ನಾಮಪತ್ರದ ವೇಳೆ ಅಫಿಡವಿಟ್​ನಲ್ಲಿ ಸೇರಿಸಿಲ್ಲ. ಇದು ನಿಯಮಕ್ಕೆ ವಿರುದ್ಧವಾಗಿದೆ. ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಎಂದು ಕೋರಿ ಆ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ಅಭ್ಯರ್ಥಿ ಪ್ರಶ್ನೆ ಮಾಡಿದ್ದರು. ಗುವಾಹಟಿ ಹೈಕೋರ್ಟ್ ಈ ಅಭಿಪ್ರಾಯವನ್ನು ಪುರಸ್ಕರಿಸಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!