Sunday, June 26, 2022

Latest Posts

ಗಾಂಜಾ ಸೇವನೆ, ಮಾರಾಟ ಆರೋಪ: 15 ಮಂದಿ ಪೊಲೀಸ್ ವಶಕ್ಕೆ

ಹೊಸದಿಗಂತ ವರದಿ, ಶಿರಸಿ:

ಮಾದಕ ವಸ್ತು ಗಾಂಜಾ ಸೇವನೆ ಹಾಗೂ ಮಾರಾಟದ ಆರೋಪದ ಮೇಲೆ ನಗರದ ವಿವಿಧ ಬಡಾವಣೆಗಳಿಂದ 15 ಜನ ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಹೆಚ್ಚಿನ ಪರೀಕ್ಷೆ ಹಾಗೂ ಕಾನೂನು ಪ್ರಕ್ರಿಯೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ.
ನಗರದಲ್ಲಿ ಗಾಂಜಾ ಮಾರಾಟ ಮತ್ತು ಸೇವನೆ ಹೆಚ್ಚುತ್ತಿದ್ದು ಯುವ ಜನರು ಬಲಿಯಾಗುತ್ತಿರುವ ಕುರಿತು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಡಿ.ವೈ ಎಸ್. ಪಿ ರವಿ ನಾಯ್ಕ, ಸಿ.ಪಿ.ಐ ರಾಮಚಂದ್ರ ನಾಯಕ ಅವರ ಮಾರ್ಗದರ್ಶನದಲ್ಲಿ ಪಿ.ಎಸ್. ಐ ಭೀಮಾಶಂಕರ್ ಹಾಗೂ ಸಿಬ್ಬಂದಿಗಳು ನಗರದ ಕಸ್ತೂರ್ಬಾನಗರ, ನೆಹರೂ ನಗರ ಸೇರಿದಂತೆ ಬೇರೆ ಬೇರೆ ಭಾಗಗಳಿಂದ 15 ಜನ ಯುವಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು ವೈದ್ಯಕೀಯ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss