ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದ ಉಜಳಾಂಬ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಗಾಂಜಾವನ್ನು ಬೀದರ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಜಮೀನಿನಲ್ಲಿ 700ಕ್ಕೂ ಹೆಚ್ಚು 6 ಅಡಿ ಎತ್ತರದ ಗಿಡಗಳನ್ನು ಬೆಳೆಸಲಾಗುತ್ತಿದೆ ಎಂಬ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ಮೂಲದ ಬಸಂತ್ ಗಾಂಜಾ ಬೆಳೆಗಾರ ಎಂದು ತಿಳಿದು ಬಂದಿದೆ. ಆತ ಪರಾರಿಯಾಗಿದ್ದು, ಆತನನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.
ಎಸ್ ಪಿ ನೇತೃತ್ವದಲ್ಲಿ ಗಾಂಜಾ ಗಿಡಗಳನ್ನು ನಾಶಪಡಿಸಲಾಯಿತು. ಈ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.