ತಮಿಳುನಾಡಿಗೆ ಹದಿನೈದು ದಿನ ನೀರು ಬಿಡಲು ಸಾಧ್ಯವಿಲ್ಲ: ಸಚಿವ ಎಂ.ಬಿ.ಪಾಟೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿಗೆ ಹದಿನೈದು ದಿನಗಳ ಕಾಲ ನೀರು ಬಿಡಲು ಸಾಧ್ಯವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ತಮಿಳುನಾಡಿಗೆ 5000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕ ಸರಕಾರಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಆದೇಶವನ್ನು ನೀಡಿರುವ ಕುರಿತಾಗಿ ಪ್ರತಿಕ್ರಿಯಿಸಿರುವ ಅವರು ತಮಿಳುನಾಡಿಗೆ ಹದಿನೈದು ದಿನ ನೀರು ಬಿಡುವುದು ತುಂಬಾ ಕಷ್ಟ. ನಮ್ಮಲ್ಲಿಯೇ ನೀರಿಲ್ಲ, ಈ ಆದೇಶವನ್ನು ಜಾರಿಗೆ ತರಲು ನಮಗೆ ತುಂಬಾ ಕಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ.

ಇಂದಿನಿಂದ ಮುಂದಿನ 15 ದಿನಗಳವರೆಗೆ ಪ್ರತಿನಿತ್ಯ 5000 ಕ್ಯೂಸೆಕ್ ನೀರು ಬಿಡಲು ಕಾವೇರಿ ನದಿ ನಿಯಂತ್ರಣ ಸಮಿತಿ ರಾಜ್ಯಕ್ಕೆ ಮತ್ತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!