ಹೊಸ ದಿಗಂತ ಡಿಜಿಟಲ್ ಡೆಸ್ಕ್:
ವೆಬ್‌ಸೈಟ್‌ಗಳು ಮತ್ತು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಒಪ್ಪಿಗೆಯಿಲ್ಲದೆ ವಾಣಿಜ್ಯ ಲಾಭಕ್ಕಾಗಿ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಹೆಸರು ಅಥವಾ ಚಿತ್ರಗಳನ್ನು ಬಳಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ.
ತಮ್ಮ ವೈಯಕ್ತಿಕ ಹಕ್ಕುಗಳ ರಕ್ಷಣೆ ಕೋರಿ ಪವನ್ ಕಲ್ಯಾಣ್ ಅವರು ದೆಹಲಿ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು.
ಪವನ್ ಕಲ್ಯಾಣ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರು, ಜಾನ್ ಡೋ ಮತ್ತು ಹಲವಾರು ಇ-ಕಾಮರ್ಸ್ ವೆಬ್‌ಸೈಟ್‌ಗಳೂ ಸೇರಿದಂತೆ 14 ಸಂಸ್ಥೆಗಳು, ಕೃತಕ ಬುದ್ಧಿಮತ್ತೆ ಮತ್ತು ಡೀಪ್‌ಫೇಕ್ ತಂತ್ರಜ್ಞಾನವನ್ನು ಬಳಸಿಕೊಂಡು ಪವನ್ ಕಲ್ಯಾಣ್ ಅವರ ವ್ಯಕ್ತಿತ್ವದ ಲಕ್ಷಣಗಳನ್ನು ಬಳಸದಂತೆ ಮುಂದಿನ ವಿಚಾರಣೆಯ ದಿನಾಂಕದವರೆಗೆ ನಿರ್ಬಂಧಿಸಿದರು.
ಪವನ್ ಕಲ್ಯಾಣ್ ಅವರು ಪ್ರಸಿದ್ಧ ಸಾರ್ವಜನಿಕ ವ್ಯಕ್ತಿ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿದ್ದಾರೆ. ಅವರ ಚಿತ್ರಗಳು, ಧ್ವನಿ, ಹೆಸರು ಮತ್ತು ಹೋಲಿಕೆಯನ್ನು ಪ್ರತಿವಾದಿ ಸಂಸ್ಥೆಗಳು ಅವರ ಒಪ್ಪಿಗೆಯಿಲ್ಲದೆ ನೇರವಾಗಿ ಅಥವಾ ಇ-ಕಾಮರ್ಸ್ ವೇದಿಕೆಯ ಮೂಲಕ ವಾಣಿಜ್ಯ ಲಾಭಕ್ಕಾಗಿ ಸರಕುಗಳನ್ನು ಮಾರಾಟ ಮಾಡಲು ಬಳಸುತ್ತಿವೆ ಎಂಬುದನ್ನು ಕೋರ್ಟ್ ಗಮನಿಸಿದೆ.
ಪವನ್ ಕಲ್ಯಾಣ್ ಒಪ್ಪಿಗೆಯಿಲ್ಲದೆ ತಮ್ಮ ವೆಬ್‌ಪುಟಗಳಲ್ಲಿ ಬಳಸುವ ಎಐ ಸಾಫ್ಟ್‌ವೇರ್‌ನಲ್ಲಿ ಅವರ ವ್ಯಕ್ತಿತ್ವದ ಗುಣಲಕ್ಷಣಗಳನ್ನು ಬಳಸುತ್ತಿವೆ. ಕೆಲವು ಸಾಮಾಜಿಕ ಮಾಧ್ಯಮ ಖಾತೆಗಳು ಅವರನ್ನು ಅನುಕರಿಸುತ್ತಿವೆ ಎಂಬ ಅವರ ಮನವಿಯನ್ನು ಪುರಸ್ಕರಿಸಲಾಗಿದೆ. ಮೇ 12ಕ್ಕೆ ಈ ಪ್ರಕರಣದ ಹೆಚ್ಚಿನ ವಿಚಾರಣೆಗೆ ವಿಷಯವನ್ನು ಪಟ್ಟಿ ಮಾಡಿದೆ.

