PROTEST | ಬೆಂಗಳೂರಿನಲ್ಲಿ ಇಂದು ಆಟೋ ಸಿಗೋದಿಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿ ಬೆಂಗಳೂರಿನಲ್ಲಿ ಇಂದು ಆಟೋರಿಕ್ಷಾ ಸಂಘಟನೆಗಳು ಮುಷ್ಕರ ನಡೆಸಲಿದ್ದು, ಸಮಯಕ್ಕೆ ಸರಿಯಾಗಿ ಆಟೋ ಸಿಗೋದಿಲ್ಲ.

ಹೌದು, ರ‍್ಯಾಪಿಡೋ ಬೈಕ್ ಟ್ಯಾಕ್ಸಿ, ಬೌನ್ಸ್ ಎಲೆಕ್ಟ್ರಿಕ್ ಬೈಕ್‌ಗೆ ಅನುಮತಿ ನೀಡಿದ್ದು, ಇದನ್ನು ವಾಪಾಸ್ ಪಡೆಯಬೇಕು ಎನ್ನುವುದು ಆಟೋರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟದ ಡಿಮ್ಯಾಂಡ್ ಆಗಿದೆ.

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದು ಪ್ರತಿಭಟನೆಗಿಳಿದಿರುವ ಚಾಲಕರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತಯಾರಿ ನಡೆಸಿದ್ದಾರೆ. ಬೆಳಗ್ಗೆ 11 ಗಂಟೆಗೆ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಆಟೋ ರ‍್ಯಾಲಿ ಆರಂಭವಾಗಲಿದ್ದು, ಎರಡು ಸಾವಿರಕ್ಕೂ ಹೆಚ್ಚು ಆಟೋಗಳು ರ‍್ಯಾಲಿಯಲ್ಲಿ ಭಾಗಿಯಾಗಲಿವೆ.

ರ‍್ಯಾಪಿಡೋ ಹಾಗೂ ಬೌನ್ಸ್‌ನಿಂದ ಆಟೋ ಚಾಲಕರಿಗೆ ಗ್ರಾಹಕರ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾಗಿ ಇಂದು ಮುಷ್ಕರ ಕೈಗೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!