ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾವೇರಿ ನೀರಿನ್ನು ತಮಿಳುನಾಡಿಗೆ ಬಿಡೋದಕ್ಕೆ ಸಾಧ್ಯವಿಲ್ಲ, ನಮ್ಮ ಜನರು ನೀರಿನ ಮೇಲೆ ಅವಲಂಬಿತರಾಗಿದ್ದಾರೆ. ಮತ್ತೆ ನೀರು ಬಿಟ್ಟರೆ ಜನ, ಜಾನುವಾರುಗಳಿಗೆ ಸಮಸ್ಯೆಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

ಮಾನವರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನೀರು ನಿಯಂತ್ರಣ ಸಮಿತಿ ಹೇಳಿದಂತೆ 15 ದಿನ 5000 ಕ್ಯುಸೆಕ್ ನೀರು ಬಿಟ್ಟರೆ ರೈತರಿಗೆ ತೊಂದರೆಯಾಗುತ್ತದೆ. ಈಗಾಗಲೇ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗುತ್ತಿದೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಮರುಪರಿಶೀಲನೆ ಮಾಡುವಂತೆ ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!