ಹೊಸದಿಗಂತ ಡಿಜಿಟಲ್ ಡೆಸ್ಕ್:
2010ರ ನಂತರ ಪಶ್ಚಿಮ ಬಂಗಾಳದಲ್ಲಿ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳನ್ನು ಕಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿದ ನಂತರ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ಗೆ ಹರಿಹಾಯ್ದ ಪ್ರಧಾನಿ ನರೇಂದ್ರ ಮೋದಿ, ಅವರು ಜೀವಂತವಾಗಿರುವವರೆಗೂ ದಲಿತರು ಮತ್ತು ಬುಡಕಟ್ಟು ಜನಾಂಗದವರ ಮೀಸಲಾತಿಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಹರಿಯಾಣದ ಭಿವಾನಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಪಶ್ಚಿಮ ಬಂಗಾಳದಲ್ಲಿ ಅವರು ರಾತ್ರೋರಾತ್ರಿ ಮುಸ್ಲಿಮರಿಗೆ ಮತ್ತು ನುಸುಳುಕೋರರಿಗೆ ಒಬಿಸಿ ಪ್ರಮಾಣಪತ್ರಗಳನ್ನು ನೀಡಿದ್ದಾರೆ. ಕಳೆದ 10-12 ರಲ್ಲಿ ಮುಸ್ಲಿಮರಿಗೆ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ. I.N.D.I.A ಮೈತ್ರಿಕೂಟದ ಮನಸ್ಥಿತಿಯನ್ನು ನೋಡಿ, ಅವರು ಮುಸ್ಲಿಮರಿಗೆ OBC ಮೀಸಲಾತಿ ನೀಡುವ ನಿರ್ಧಾರವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದರು.