April 4, 2026
Saturday, April 4, 2026
spot_img

ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ: ಡ್ಯಾನ್ಸರ್ ಸಾವು, ನಿನ್ನೆಯಷ್ಟೇ ಹೊಸ ಕಾರ್‌ ಪಡೆದಿದ್ರು!

ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ನಡೆದಿದೆ.

ಸುಧೀಂದ್ರ ಮೃತ ಡ್ಯಾನ್ಸರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಪೆರ್ಮನಹಳ್ಳಿಯಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಕೆಟ್ಟು ನಿಂತ ಕಾರನ್ನು ಡ್ಯಾನ್ಸರ್ ಸುಧೀಂದ್ರ ಪರಿಶೀಲನೆ ಮಾಡುವಾಗ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ.

ಪರಿಣಾಮ ಸುಧೀಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡ್ಯಾನ್ಸರ್ ಸುದೀಂಧ್ರ ವಿವಿಧ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದರು. ದಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸುಧೀಂದ್ರ ಸೋಮವಾರವಷ್ಟೇ ಹೊಸ ಮಾರುತಿ ಸುಜುಕಿ ಎಕೋ ಕಾರು ಡೆಲಿವರಿ ಪಡೆದಿದ್ದರು. ರಸ್ತೆ ಮಧ್ಯೆ ಕಾರು ಕೆಟ್ಟು ನಿಂತಿದ್ದರಿಂದ ಪರೀಕ್ಷಿಸಲು ಕಾರಿನಿಂದ ಕೆಳಗಿಳಿದ ವೇಳೆ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ಸುಧೀಂದ್ರ ಮೃತಪಟ್ಟಿದ್ದಾರೆ.

ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಸುಧೀಂದ್ರ ಜೀ ಕನ್ನಡದ ಸೈ ಡ್ಯಾನ್ಸ್ ಶೋ ಸೇರಿದಂತೆ ವಿವಿಧ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದರು. ಅಲ್ಲದೇ ಡಾಬಸ್ ಪೇಟೆಯಲ್ಲಿ ಡ್ಯಾನ್ಸ್ ಕ್ಲಾಸ್ ನಡೆಸಿ ನೂರಾರು ಯುವಕ, ಯುವತಿಯರಿಗೆ ಮಕ್ಕಳಿಗೆ ಟ್ರೈನಿಂಗ್ ನೀಡುತ್ತಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !