ಹೊಸದಿಗಂತ ವರದಿ ಮದ್ದೂರು:
ಕ್ಯಾಂಟರ್ ಪಲ್ಟಿಯಾಗಿ ಚಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಎ್ಸ್ಪ್ರೇಸ್ ವೇನಲ್ಲಿ ನಡೆದಿದೆ.
ಬೆಳಗಾಂ ಜಿಲ್ಲೆಯ, ರಾಮದುರ್ಗ ತಾಲೂಕಿನ, ಮುಳ್ಳೂರು ಗ್ರಾಮದ ಸಿದ್ದಪ್ಪಜಿ ನವಲಗುಂದ (61) ಮೃತ ಪಟ್ಟ ವ್ಯಕ್ತಿಯಾಗಿದ್ದು, ಮಂಡ್ಯದಿಂದ ಬೆಂಗಳೂರಿಗೆ ಜನರೇಟರ್ ಹೊತ್ತು ತೆರಳುತ್ತಿದ್ದ ಕ್ಯಾಂಟರ್ ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸರ್ವೀಸ್ ರಸ್ತೆ ಉರುಳಿ ಬಿದ್ದಿದೆ.
ಘಟನೆಯಿಂದಾಗಿ ಚಾಲಕ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಮದ್ದೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.