Tuesday, August 16, 2022

Latest Posts

ದೇಶದ CAPF ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳ ಮಾರಾಟ: ಅಮಿತ್ ಶಾ

ಹೊಸದಿಲ್ಲಿ: ದೇಶದಲ್ಲಿನ CAPF ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳ ಮಾರಾಟ ಮಾತ್ರ ಮಾಡಬೇಕು ಎಂದು ಅಮಿತ್ ಶಾ ತಿಳಿಸಿದ್ದಾರೆ.

ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಗೃಹ ಸಚಿವ ಅಮಿತ್ ಶಾ, ದೇಶದ ಎಲ್ಲಾ CAPF ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳನ್ನು ಮಾತ್ರ ಮಾರಾಟ ಮಾಡಲಾಗುತ್ತದೆ. ಇದು ಜೂನ್ 1ರಿಂದ ಪ್ರಾರಂಭವಾಗಲಿದ್ದು, ಇದರಿಂದ ದೇಶದ ಸುಮಾರು 10 ಲಕ್ಷ CAPF ಸಿಬ್ಬಂದಿ ಹಾಗೂ 50 ಲಕ್ಷ CAPF ಕುಟುಂಬಗಳು ಸ್ವದೇಶಿ ವಸ್ತುಗಳನ್ನು ಬಳಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ನೆನ್ನೆ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಆತ್ಮ ನಿರ್ಭಾರ್ ಭಾರತ್ ಅಥವಾ ಸ್ವಾವಲಂಬನೆ ಕುರಿತಾಗಿ ಮಾತನಾಡಿದ್ದು, ಮೇಕ್ ಇನ್ ಇಂಡಿಯಾ, ಮೇಡ್ ಇನ್ ಇಂಡಿಯಾ ವಸ್ತುಗಳ ಉತ್ಪಾದನೆ ಕುರಿತಾಗಿ ಹೇಳಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss