ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದಲ್ಲಿ ಪ್ರತಿ 1 ಲೀಟರ್ ನೀರಿಗೆ 1 ಪೈಸೆ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.ವಿಧಾನ ಪರಿಷತ್‌ನಲ್ಲಿ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡ ಪ್ರಶ್ನೆಗೆ ಡಿಸಿಎಂ ಡಿಕೆಶಿವಕುಮಾರ್ ಉತ್ತರಿಸಿದರು.
ಬೇಸಿಗೆ ಕಾಲದಲ್ಲಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕೆ ಅನೇಕ ಕ್ರಮ ತೆಗೆದುಕೊಳ್ತಿದ್ದೇವೆ. ಮಾರ್ಚ್ 22ರಂದು ವಿಶ್ವ ಜಲ ದಿನ ಇದೆ. ಹೀಗಾಗಿ ಅಂದಿನಿಂದ ಒಂದು ತಿಂಗಳ ಕಾಲ ʻನೀರು ಉಳಿಸಿʼ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
ಅಪಾರ್ಟ್‌ಮೆಂಟ್‌ಗಳಲ್ಲಿ ಕೆಲವರು ಯಾವುದೇ ಅನುಮತಿ ಇಲ್ಲದೇ ಬೋರ್‌ವೆಲ್ ಕೊರೆದಿದ್ದಾರೆ. ಅವರಿಗೆ ನೊಟೀಸ್ ಕೊಡುವ ಕೆಲಸ ಮಾಡಿದ್ದೇವೆ. 2014 ರಿಂದ ಇಲ್ಲಿವರೆಗೂ ನೀರಿನ ದರ ಏರಿಕೆ ಮಾಡಿಲ್ಲ. ಹೀಗಾಗಿ 1 ಪೈಸೆ ಆದರು ಜಾಸ್ತಿ ಮಾಡಬೇಕು ಅಂತ ತೀರ್ಮಾನ ಮಾಡಲಾಗಿದೆ. 6-7 ಪೈಸೆ ಜಾಸ್ತಿ ಮಾಡಬೇಕು ಅಂತ BWSSB ಅವರು ಮನವಿ ಮಾಡಿದ್ರು. ನಾನು 1 ಪೈಸೆ ಏರಿಕೆ ಮಾಡಲು ಒಪ್ಪಿಗೆ ಕೊಟ್ಡಿದ್ದೇನೆ ಎಂದು ವಿವರಿಸಿದರು.