ಮಕರ ಸಂಕ್ರಾಂತಿ: ಸಿದ್ದೇಶ್ವರ ಸ್ವಾಮಿ ದೇವರ ದರುಶನ ಪಡೆದ ಸಚಿವ ಆನಂದ್ ಸಿಂಗ್

ಹೊಸದಿಗಂತ ವರದಿ, ವಿಜಯನಗರ:

ಮಕರ ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ಪರಿಸರ, ಜೀವಿಶಾಸ್ತ್ರ, ಪ್ರವಾಸೋದ್ಯಮ ಹಾಗೂ ವಿಜಯನಗರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು, ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಉಜ್ಜಯಿನಿ ಸದ್ದರ್ಮ ಪೀಠದ ಮರಳು ಸಿದ್ದೇಶ್ವರ ಸ್ವಾಮಿ ದೇವರ ದರುಶನ ಪಡೆದರು. ನಂತರ ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾ ಸ್ವಾಮಿಜಿ ಅವರಿಂದ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಹಡಗಲಿ ಮಠದ ಹಾಲವೀರಪ್ಪಜ್ಜ ಸ್ವಾಮೀಜಿ, ಕಾನಾಮಡುಗು ದಾಸೋಹಮಠದ ನಾಲ್ವಡಿ ಶರಣರು, ಮರಿಯಮ್ಮನಹಳ್ಳಿ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಚಾನುಕೋಟಿ ಮಠದ ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಕೂಡ್ಲಿಗಿಯ ಪ್ರಶಾಂತ ಶಿವಾಚಾರ್ಯ ಸ್ವಾಮೀಜಿ, ಮುಷ್ಟೂರು ರುದ್ರಮುನಿ ಸ್ವಾಮೀಜಿ ಹಾಗೂ ಸಚಿವರ ಆಪ್ತರಾದ ಮುನ್ನಾಭಾಯಿ, ಸಂದೀಪ್ ಸಿಂಗ್, ಶ್ರೀನಿವಾಸ್ ಸೇರಿದಂತೆ ಸ್ಥಳೀಯ ಮುಖಂಡರು, ಇತರರು ಉಪಸ್ಥಿತರಿದ್ದರು. ನಂತರ ಉಪಸ್ಥಿತರಿದ್ದ ವಿವಿಧ ಸ್ವಾಮೀಜಿಗಳು ಸಚಿವ ಆನಂದ್ ಸಿಂಗ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಇದಕ್ಕೂ ಮುನ್ನ ಸಚಿವರು ಶ್ರೀಮಠದ ಸ್ವಾಮೀಜಿಗಳಿಗ ಹಣ್ಣು, ಹೂವು ನೀಡಿ ಭಕ್ತಿ ಸಮರ್ಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!