ಹೊಸದಿಗಂತ ಡಿಜಿಟಲ್ ಡೆಸ್ಕ್:
ರಜೌರಿ ಎನ್‌ಕೌಂಟರ್ ನಲ್ಲಿ ಹುತಾತ್ಮರಾದ ಮಂಗಳೂರು ಮೂಲದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ಇಂದು ಸಂಜೆ ಬೆಂಗಳೂರಿಗೆ ಆಗಮಿಸಲಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರದಂದು ಸೇನೆ ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಮಂಗಳೂರಿನ ಯೋಧ ಕ್ಯಾಪ್ಟನ್ ಪ್ರಾಂಜಲ್ (28) ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಹೆಚ್ಎಎಲ್ ಏರ್ಪೋರ್ಟ್ಗೆ ಪ್ರಾಂಜಲ್ ಪಾರ್ಥಿವ ಶರೀರ ಆಗಮಿಸಲಿದ್ದು, ಸರ್ಕಾರದ ವತಿಯಿಂದ ಗೌರವ ಸಲ್ಲಿಸಲಾಗುತ್ತದೆ. ನಂತರ ಬನ್ನೇರುಘಟ್ಟ ಸಮೀಪ ನಂದನವನ ಲೇಔಟ್ ನಿವಾಸಕ್ಕೆ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತದೆ. ಇಲ್ಲಿ ಕುಟುಂಬಸ್ಥರು ಅಂತಿಮ ನಮನ ಸಲ್ಲಿಸುತ್ತಾರೆ.
ಇಂದು ಸೋಮಸಂದ್ರಪಾಳ್ಯದ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.