ನಾಯಕ ರೋಹಿತ್ ಶತಕ: ದಿನದಾಟದ ಅಂತ್ಯದಲ್ಲಿ 144 ರನ್ ಮುನ್ನಡೆ ಕಾಯ್ದುಕೊಂಡ ಇಂಡಿಯಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ನಾಯಕ ರೋಹಿತ್ ಶರ್ಮಾ ಶತಕ, ರವೀಂದ್ರ ಜಡೇಜಾ ಹಾಗೂ ಅಕ್ಸರ್ ಪಟೇಲ್ ಅವರ ತಾಳ್ಮೆಯ ಆಟ ಮೂಲಕ ಎರಡನೇ ದಿನದಾಟದಲ್ಲಿ ಭಾರತ 7 ವಿಕೆಟ್ ನಷ್ಟಕ್ಕೆ 321 ರನ್ ಸಿಡಿಸಿದೆ. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 144 ರನ್ ಮುನ್ನಡೆ ಕಾಯ್ದುಕೊಂಡಿದೆ.

ಮೊದಲ ದಿನದಾಟದ ಅಂತ್ಯದಲ್ಲಿ ಭಾರತ 1 ವಿಕೆಟ್ ನಷ್ಟಕ್ಕೆ 77 ರನ್ ಸಿಡಿಸಿ ಕ್ರೀಸ್ ಕಾಯ್ದುಕೊಂಡಿತ್ತು. 2ನೇ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರಿಸಿದ ಭಾರತಕ್ಕೆ ನಾಯಕ ರೋಹಿತ್ ಶರ್ಮಾ ದಿಟ್ಟ ಹೋರಾಟ ನೀಡಿದರು. ಆರ್ ಅಶ್ವಿನ್ ಜೊತೆ ಇನ್ನಿಂಗ್ಸ್ ಮುಂದುವರಿಸಿದರು. ಒಂದೆಡೆ ಟೀಂ ಇಂಡಿಯಾ ಕೂಡ ವಿಕೆಟ್ ಕಳೆದುಕೊಳ್ಳುತ್ತಲೇ ಹೋಯಿತು. ಆರ್ ಅಶ್ವಿನ್ 23 ರನ್ ಸಿಡಿಸಿ ಔಟಾದರು. ಇತ್ತ ಚೇತೇಶ್ವರ ಪೂಜಾರ ಕೇವಲ 7 ರನ್ ಸಿಡಿಸಿ ನಿರಾಸೆ ಮೂಡಿಸಿದರು.

ಒಂದೆಡೆ ವಿಕೆಟ್ ಪತನಗೊಳ್ಳುತ್ತಿದ್ದರೂ ರೋಹಿತ್ ಶರ್ಮಾ ದಿಟ್ಟ ಹೋರಾಟ ನೀಡಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿ ಮಿಂಚಿದರು.ಸೂರ್ಯಕುಮಾರ್ ಯಾದವ್ ಕೇವಲ 8 ರನ್ ಸಿಡಿಸಿ ಔಟಾದರು. ಅತ್ಯುತ್ತಮ ಇನ್ನಿಂಗ್ಸ್ ಮೂಲಕ ಆಸ್ಟ್ರೇಲಿಯಾ ಲೆಕ್ಕಾಚಾರ ಉಲ್ಟಾ ಮಾಡಿದ ರೋಹಿತ್ ಶರ್ಮಾ 212 ಎಸೆಚ ಎದುರಿಸಿ 120 ರನ್ ಸಿಡಿಸಿ ಔಟಾದರು.

ಶ್ರೀಕಾರ್ ಭರತ್ ಕೇವಲ 8 ರನ್ ಸಿಡಿಸಿ ಔಟಾದರು. ಆದರೆ 8ನೇ ವಿಕೆಟ್‌ಗೆ ರವೀಂದ್ರ ಜಡೇಜಾ ಹಾಗೂ ಅಕ್ಸರ್ ಪಟೇಲ್ ಹೋರಾಟ ಟೀಂ ಇಂಡಿಯಾಗೆ ಮತ್ತೆ ಟೀಮ್ ರನ್ ಹೆಚ್ಚಿಸಿದರು . ರವೀಂದ್ರ ಜಡೇಜಾ ಹಾಗೂ ಅಕ್ಸರ್ ಪಟೇಲ್ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು. ಈ ಮೂಲಕ ಭಾರತ 300 ರನ್ ಗಡಿ ದಾಟಿತು.

ದಿನದಾಟ ಅಂತ್ಯದಲ್ಲಿ ಜಡೇಜಾ ಅಜೇಯ 66 ರನ್ ಸಿಡಿಸಿದರೆ, ಅಕ್ಸರ್ ಪಟೇಲ್ ಅಜೇಯ 52 ರನ್ ಸಿಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!