ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಕಾಶ್ಮೀರದಲ್ಲಿ ಮೂವತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಭಯೋತ್ಪಾದಕರನ್ನು ವಿಶೇಷ ತನಿಖಾ ಸಂಸ್ಥೆ ಬಂಧಿಸಿದೆ.
ಕಾಶ್ಮೀರದಲ್ಲಿ ಹಲವು ವಿಧ್ವಂಸಕ ಕೃತ್ಯಗಳನ್ನು ಎಸಗಿ ಕಳೆದ ೩೦ ವರ್ಷಗಳಿಂದ ತಲೆಮರೆಸಿಕೊಂಡಿದ್ದರು. ದೋಡಾ ಜಿಲ್ಲೆಯಲ್ಲಿ ಉಗ್ರರು ತಲೆಮರೆಸಿಕೊಂಡಿದ್ದು, ವಿಶೇಷ ಕಾರ್ಯಾಚರಣೆ ನಡೆಸಿ ಅಧಿಕಾರಿಗಳು ಬಂಧಿಸಿದ್ದಾರೆ.
ಫಿರ್ದೌಸ್ ಅಹ್ಮದ್ ವಾನಿ ಹಾಗೂ ಖುರ್ಷಿದ್ ಅಹ್ಮದ್ ಮಲಿಕ್ನ್ನು ಬಂಧಿಸಲಾಗಿದೆ. ಕಳೆದ ಕೆಲವು ದಶಕಗಳಿಂದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಇವರು ಮೋಸ್ಟ್ ವಾಂಟೆಡ್ ಉಗ್ರರ ಲಿಸ್ಟ್ನಲ್ಲಿ ಇದ್ದರು.