Wednesday, February 8, 2023

Latest Posts

ನಕಿರೇಕಲ್ ಬಳಿ ರಸ್ತೆ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಬೆಂಕಿ, ಇಬ್ಬರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಲ್ಗೊಂಡ ಜಿಲ್ಲೆಯ ನಕಿರೇಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದು, ಅವರ ಸ್ಥಿತಿಯೂ ಗಂಭೀರ ಎನ್ನಲಾಗುತ್ತಿದೆ.

ಹೈದರಾಬಾದ್‌ನಿಂದ ಸೂರ್ಯಪೇಟ್ ಕಡೆಗೆ ಹೋಗುತ್ತಿದ್ದ ಕಾರು ಇರುಪಾಮುಲ ಬೈಪಾಸ್ ಜಂಕ್ಷನ್‌ನಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಕೂಡಲೇ ಬೆಂಕಿ ಹೊತ್ತಿಕೊಂಡಿದೆ. ಕಾರಿಗೆ ಬೆಂಕಿ ಏಕಾಏಕಿ ಆವರಿಸಿದ್ದರಿಂದ ಕಾರಿನಲ್ಲಿದ್ದವರು ಹೊರಬರಲು ಅಸಾಧ್ಯವಾಗಿ ಇಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದಾರೆ.

ಅಪಘಾತಕ್ಕೀಡಾದ ಕಾರಿನಲ್ಲಿದ್ದ ಎಲ್ಲ ಪ್ರಯಾಣಿಕರು ಸೂರ್ಯಪೇಟೆ ಪಟ್ಟಣದ ಒಂದೇ ಕುಟುಂಬದವರು ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ನಕಿರೇಕಲ್ ಸರಕಾರಿ ಶವಾಗಾರಕ್ಕೆ ರವಾನಿಸಿದ್ದಾರೆ. ಮೃತರನ್ನು ತಾಯಿ ಮತ್ತು ಮಗ ಎಂದು ದೃಢಪಡಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!