October 18, 2026
Sunday, October 18, 2026
spot_img

ದೇವರ ಸನ್ನಿಧಿಗೆ ಹೊರಟಿದ್ದವರ ಕಾರು ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇವರ ಸನ್ನಿಧಿಗೆ ಹೊರಟಿದ್ದ ಕಾರೊಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಳೀಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್‌ ಬಳಿ ಭೀಕರ ಅಪಘಾತಕ್ಕೀಡಾಗಿದೆ.

ಕಾರಿನಲ್ಲಿ ಕುಳಿತಿದ್ದ ನಾಲ್ವರು ಕಾಗವಾಡದಿಂದ ಶ್ರೀಶೈಲಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೇ ಆಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ (70) ಹಾಗೂ ಕಾಮಪ್ಪ ಅವರಾದಿ (65) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Must Read