ಕಾರು ಅಪಘಾತ: ನಟ ನಾಗಭೂಷಣ್ ಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 
 
ನಟ ನಾಗಭೂಷಣ್ ಕಾರು ಅಪಘಾತದಲ್ಲಿ (Car accident) ಮಹಿಳೆಯೊಬ್ಬರ ಸಾವನ್ನಪ್ಪಿದ್ದು, ಈ ಸಂಬಂಧ ಬಂಧಿಸಿ, ಆನಂತರ ಸ್ಟೇಶನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿತ್ತು.

ಇದೀಗ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ (Police) ರು ನಟನಿಗೆ ನೋಟಿಸ್ (Notice) ಜಾರಿ ಮಾಡಿದ್ದಾರೆ. ಅಕ್ಟೋಬರ್ 3ರಂದು ಹಾಜರಾಗಲು ನೋಟಿಸ್ ನಲ್ಲಿ ತಿಳಿಸಿದ್ದಾರೆ.

ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಪ್ರೇಮಾ ಎನ್ನುವ ಮಹಿಳೆ ಸಾವನ್ನಪ್ಪಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪತಿ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!