ಎರಡು ಕಾರಿನ ನಡುವೆ ಮುಖಾಮುಖಿ ಡಿಕ್ಕಿ, ಓರ್ವ ಸಾವು

ಹೊಸದಿಗಂತ ವರದಿ ಮಡಿಕೇರಿ:

ಎರಡು ಕಾರುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಗರಹಳ್ಳಿಯಲ್ಲಿ ನಡೆದಿದೆ.
ಸುಂಟಿಕೊಪ್ಪದ ನಿವಾಸಿ ಮುಸ್ತಫಾ (47) ಮೃತ ದುರ್ದೈವಿ.  ಬುಧವಾರ ಬೆಳಗ್ಗೆ ತಮ್ಮ ಇನ್ನೋವಾ ವಾಹನದಲ್ಲಿ ಪುತ್ರಿಯನ್ನು ದ್ವಿತೀಯ ಪಿಯುಸಿ ಪರೀಕ್ಷೆಗೆಂದು ಕುಶಾಲನಗರದ ಕಾಲೇಜಿಗೆ ಬಿಟ್ಟು ಸುಂಟಿಕೊಪ್ಪಕ್ಕೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಕಾರು ಹಾಗೂ ಇನ್ನೋವಾ ನಡುವೆ ಡಿಕ್ಕಿಯಾಗಿದೆ. ಪ್ರವಾಸಿಗರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!