ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸಕ್ಕೆ ನಾಲ್ವರು ಬಲಿಯಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕಾರು ಮತ್ತು ಕಂಟೈನರ್ ಟ್ರಕ್ ನಡುವೆ ಡಿಕ್ಕಿಯಾದ ಕೂಡಲೇ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ಮುಂಜಾನೆ ಮಧುರೈ ಜಿಲ್ಲೆಯ ತಿರುಮಂಗಲಂ ಬಳಿ ಈ ದುರ್ಘಟನೆ ನಡೆದಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಈ ದುರಂತದ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ, ವಾಹನದಲ್ಲಿ ಸಿಲುಕಿಕೊಂಡಿದ್ದ ಮೃತ ದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!