ಹೊಸದಿಗಂತ ಡಿಜಿಟಲ್ ಡೆಸ್ಕ್:
ಜರ್ಮನಿಯ ಮ್ಯಾಗ್ಡೆಬರ್ಗ್‌ನ ಕ್ರಿಸ್‌ಮಸ್ ಮಾರುಕಟ್ಟೆಯಲ್ಲಿ ಜನಸಂದಣಿಯ ಮೇಲೆ ಕಾರೊಂದು ನುಗ್ಗಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದೊಂದು ಪೂರ್ವಯೋಜಿತ ದಾಳಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಂಕಿತ ದಾಳಿ ನಡೆಸಿದ ಕಾರು ಚಾಲಕ 50 ವರ್ಷ ವಯಸ್ಸಿನ ವೈದ್ಯ, ಮೂಲತಃ ಸೌದಿ ಅರೇಬಿಯಾದವನು ಎನ್ನಲಾಗಿದೆ. ಜರ್ಮನಿಯ ಕಾಯಂ ನಿವಾಸಿ ಕಾರ್ಡ್ ಪಡೆದಿದ್ದ. ಸದ್ಯ ಘಟನೆ ಬಳಿಕ ಈತನನ್ನ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ದೃಶ್ಯಾವಳಿಗಳು ವೈರಲ್ ಆಗಿವೆ. ಕಪ್ಪು ಕಾರೊಂದು ಜನದಟ್ಟಣೆಯಿದ್ದ ಕಡೆಗೆ ರಭಸದಿಂದ ನುಗ್ಗಿದೆ. ಭಯಭೀತರಾದ ಜನತೆ ಅಡ್ಡಾದಿಡ್ಡಿಯಾಗಿ ಓಡಿಸಿದ ಪರಿಣಾಮ ದುರಂತ ಸಂಭವಿಸಿರುವುದು ಕಂಡುಬಂದಿದೆ.