ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರು ಹಾಗೂ ಬೈಕ್ ನಡುವೆ ಮುಖಮುಖಿ ಡಿಕ್ಕಿಯಾದ ಪರಿಣಾಮ, ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ತಾಮಸಂದ್ರ ಬಳಿ ನಡೆದಿದೆ.
ಸಾವನ್ನಪ್ಪಿರುವ ಮೂವರನ್ನು ಕಾರ್ಖಾನೆ ಒಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಉತ್ತರ ಭಾರತದಿಂದ ಕೆಲಸಕ್ಕಾಗಿ ಇಲ್ಲಿಗೆ ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಘಟನಾ ಸ್ಥಳಕ್ಕೆ ಹಾರೋಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೃಷ್ಣ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಾರೋಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.