ಜಮ್ಮು ಕಾಶ್ಮೀರದಲ್ಲಿ ಕಾರ್ ಸ್ಫೋಟ: ಮೂವರು ಸೈನಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಜಮ್ಮು ಕಾಶ್ಮೀರದ ಶೋಪಿಯಾನ್‌ನ ಸೆಡೋವ್‌ ಪ್ರದೇಶದಲ್ಲಿ ಕಾರ್‌ ಬಾಂಬ್ ಸ್ಫೋಟ‌ ಸಂಭವಿಸಿದ್ದು ಘಟನೆಯಲ್ಲಿ ಮೂವರು ಸೈನಿಕರು ಗಾಯಗೊಂಡಿದ್ದಾರೆ.

ಸ್ಫೋಟಗೊಂಡ ಕಾರನ್ನು ರಹಸ್ಯ ಕಾರ್ಯಾಚರಣೆಗೆ ಬಾಡಿಗೆಗೆ ಪಡೆಯಲಾಗಿತ್ತು ಎಂದು ವರದಿಗಳು ಹೇಳಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಶ್ಮೀರ ಐಜಿಪಿ ವಿಜಯ್ ಕುಮಾರ್ “ವಾಹನದ ಬ್ಯಾಟರಿ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ಮಾಹಿತಿ ಸಿಕ್ಕಿದೆ, ಆದರೆ ವಾಹನದಲ್ಲಿ ಮೊದಲೇ ಐಇಡಿ ಇಡಲಾಗಿತ್ತು ಎಂದು ಶಂಕಿಸಲಾಗಿದೆ. ಈ ಕುರಿತು ಹೆಚ್ಚಿನ ಪರಿಶೀಲನೆ ನಡೆಸಲಾಗುತ್ತಿದೆ” ಎಂದಿದ್ದಾರೆ.

ಗಾಯಗೊಂಡಿರುವ ಸೈನಿಕರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!