Wednesday, November 12, 2025

ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟ: ಕರ್ನಾಟಕದಲ್ಲೂ ಹೈಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:


ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಭಯಾನಕ ಕಾರು ಸ್ಫೋಟ ಸಂಭವಿಸಿದೆ.ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದ್ದು, 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

ಸದ್ಯ ಎಲ್ಲೆಡೆ ಹೈಅಲರ್ಟ್​ ಘೋಷಿಸಿದ್ದು, ಇತ್ತ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಡಿಜಿ&ಐಜಿಪಿ ಸೂಚನೆ ನೀಡಿದ್ದಾರೆ.

ದೆಹಲಿಯಲ್ಲಿ ಕಾರು ಸ್ಫೋಟ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.

ಏರ್​ಪೋರ್ಟ್, ಬಂದರು, ರೈಲು ನಿಲ್ದಾಣ, ಬಸ್ ನಿಲ್ದಾಣಗಳು, ಮಾರ್ಕೆಟ್ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ, ಜಿಲ್ಲೆಗಳಲ್ಲಿ ನಿಗಾವಹಿಸುವಂತೆ ಎಸ್​ಪಿಗಳಿಗೆ ಡಿಜಿ&ಐಜಿಪಿ ಆದೇಶಿಸಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಕಮಿಷನರ್​​​ ಸೂಚಿಸಿದ್ದಾರೆ. ಕೂಡಲೇ ಠಾಣಾ ವ್ಯಾಪ್ತಿಯಲ್ಲಿ ಗಸ್ತು ಮಾಡಬೇಕು. ಲಾಡ್ಜ್​ಗಳನ್ನು ತಪಾಸಣೆ ಮಾಡಿ, ಲಾಡ್ಜ್‌ನಲ್ಲಿ ತಂಗಿರುವ ಹೊರ ರಾಜ್ಯದವರ ವಿಚಾರಣೆ ಮಾಡಬೇಕು. ರಾತ್ರಿ ವೇಳೆ ಗಸ್ತು ಹೆಚ್ಚಳ ಮಾಡುವಂತೆ ಡಿಸಿಪಿ, ಎಸಿಪಿ, ಇನ್ಸ್​ಪೆಕ್ಟರ್​ಗಳಿಗೆ ಬೆಂಗಳೂರು ನಗರ ಪೊಲೀಸ್​ ಕಮಿಷನರ್​​ ಸೀಮಂತ್​ ಕುಮಾರ್ ಸಿಂಗ್​​ ಸೂಚನೆ ನೀಡಿದ್ದಾರೆ.

error: Content is protected !!