October 14, 2026
Wednesday, October 14, 2026
spot_img

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಇಬ್ಬರಿಗೆ ಗಾಯ

ಹೊಸದಿಗಂತ ವರದಿ ಕಾರ್ಕಳ:

ಮಾಜಿ ಸಚಿವ ರಮಾನಾಥ ರೈ ಅವರಿದ್ದ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿ, ಇಬ್ಬರು ಗಾಯಗೊಂಡ ಘಟನೆ ಕಾರ್ಕಳದ ಸಾಣೂರು ಶ್ರೀ ರಾಮಮಂದಿರ ಬಳಿ ಡಿವೈಡರ್ ಕ್ರಾಸ್‌ನಲ್ಲಿ ಭಾನುವಾರ ನಡೆದಿದೆ.

ಘಟನೆಯಲ್ಲಿ ರಮಾನಾಥ ರೈ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಅವರ ಕಾರು ಚಾಲಕ ಮತ್ತು ಆಪ್ತ ಸಹಾಯಕ ಗಾಯಗೊಂಡಿದ್ದಾರೆ.

ಕಾರ್ಕಳ – ಮೂಡುಬಿದಿರೆ ಹೆದ್ದಾರಿಯಲ್ಲಿ ಕಾರು ಹಾಗೂ ಬಸ್‌ ನಡುವೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Must Read