September 26, 2026
Saturday, September 26, 2026
spot_img

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಹೊತ್ತಿ ಉರಿದ ಕಾರು: ಐವರು ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಸ್ಥಾನದ ಅಲ್ವಾರ್‌ ಜಿಲ್ಲೆಯ ದೆಹಲಿ ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಐದು ಮಂದಿ ಮೃತಪಟ್ಟಿದ್ದಾರೆ.

ವೈಷ್ಣೋದೇವಿ ಯಾತ್ರೆಯಿಂದ ವಾಪಾಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರಿಗೆ ಬೆಂಕಿ ಹತ್ತಿದ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ.

ಬರೀ ಹದಿನೈದು ನಿಮಿಷಗಳಲ್ಲಿ ಐದು ಜೀವಗಳು ಹೊತ್ತಿ ಉರಿದಿವೆ. ಬೆಂಕಿ ನಂದಿಸಿದ ನಂತರ ಕಾರು ಸುಟ್ಟು ಕರಕಲಾಗಿದ್ದು, ಮೃತದೇಹಗಳು ಗುರುತು ಸಿಗದಂತೆ ಬದಲಾಗಿವೆ.

ಮೂವರು ಮಹಿಳೆಯರು, ಒಬ್ಬ ಪುರುಷ ಹಾಗೂ ಅಪ್ರಾಪ್ತ ವಯಸ್ಕ ಬಾಲಕಿಮೃತಪಟ್ಟಿದ್ದಾರೆ. ಶಾರ್ಟ್‌ ಸರ್ಕೀಟ್‌ನಿಂದ ಬೆಂಕಿ ಹೊತ್ತಿರುವ ಸಾಧ್ಯತೆ ಇದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Must Read