ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಎಂಡಬ್ಲ್ಯು ಕಾರೊಂದು ಹೊತ್ತಿ ಉರಿದ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕಡಕೋಳ ಟೋಲ್ ಪ್ಲಾಜಾ ಬಳಿ ಈ ಘಟನೆ ನಡೆದಿದೆ. ಕಾರಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಕಾಏಕಿ ಕಾರು ಹೊತ್ತಿ ಉರಿದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.