ಲಾರಿಗೆ ಒಮಿನಿ ಕಾರು ಡಿಕ್ಕಿ: ಇಬ್ಬರು ಸಾವು, ಐವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಮನಗರ ಬಳಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿಗೆ ಒಮಿನಿ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ಘಟನೆ ಇಂದು ನಡೆದಿದೆ.

ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ರಾಜೇಶ್(42) ಮತ್ತು ಉಮಾ(35) ಮೃತ ದುರ್ದೈವಿಗಳು.

ಬೆಂಗಳೂರಿನಿಂದ ಮೈಸೂರು ಕಡೆಗೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಒಮಿನಿ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಒಮಿನಿಯಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಒಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಮಕ್ಕಳು ಸೇರಿದಂತೆ ನಾಲ್ವರಿಗೆ ಸಣ್ಣಪುಟ್ಟ ಗಾಯ‌ಗಳಾಗಿವೆ.

ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!