ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಪಿಲಿಭಿತ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ದಾರುಣವಾಗಿ ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ನುರಿಯಾದ ತನಕ್ಷುರ ಹೆದ್ದಾರಿ ಬಳಿ ಈ ಅವಘಡ ಸಂಭವಿಸಿದ್ದು, ಅತಿವೇಗದಲ್ಲಿ ಸಾಗುತ್ತಿದ್ದ ಎರ್ಟಿಗಾ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಕಾರಿನಲ್ಲಿ 11 ಮಂದಿ ಇದ್ದರು ಎನ್ನಲಾಗಿದೆ.
ಪರಿಣಾಮ ಕಾರು ಸ್ಫೋಟಗೊಂಡು ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾರನ್ನು ತೆರೆದು ಒಳಗೆ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ.
ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಮೃತರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದ್ದು, ಅಪಘಾತದ ಬಗ್ಗೆ ತನಿಖೆ ನಡೆಯುತ್ತಿದೆ.