ಹೊಸದಿಗಂತ ವರದಿ ಅಂಕೋಲಾ:
ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬಿಣಗಾ ಕರಿದೇವಸ್ಥಾನದ ಬಳಿ ಸಂಭವಿಸಿದೆ.
ಅಂಕೋಲಾ ತಾಲೂಕಿನ ಅಗಸೂರು ಹೊನ್ನಳ್ಳಿ ನಿವಾಸಿ ಪ್ರವೀಣ ಕೇಶವ ಗೌಡ (25) ಮೃತ ದುರ್ದೈವಿ. ಈತ ಕಾರವಾರದಿಂದ ಅಂಕೋಲಾ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರು ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಈ ಅನಾಹುತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ತಲೆಯ ಹಿಂಬದಿಗೆ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಪ್ರವೀಣ ಕೇಶವ ಗೌಡ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕಾರವಾರ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಕಾರು ಚಾಲಕ ಗೋವಾ ನಾವೆಲಿಂ ನಿವಾಸಿ ಶೇಖ್ ಮೌಲಾ ಅಲಿ ಶೇಖ್ ಅಬ್ದುಲ್ ಎನ್ನುವವರ ವಿರುದ್ಧ ಪ್ರಕರಣ ದಾಖಲಾಗಿದೆ.