ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ನೆರಗನಹಳ್ಳಿಯಲ್ಲಿ ಹಿಟ್ & ರನ್ ಗೆ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ನಂತರ ಕಾರು ಚಾಲಕ ಕಾರನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತರನ್ನು ವೆಂಕಟೇಶ್ (50) ಮಹೇಶ್ (30) ಎಂದು ಗುರುತಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಅಪಘಾತದಲ್ಲಿ ಬೈಕ್ ಸಂಪೂರ್ಣ ಜಖಂಗೊಂಡಿದೆ. ಆರೋಪಿಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.