ಕ್ಯಾಂಟರ್ ಲಾರಿಗೆ ಕಾರು ಡಿಕ್ಕಿ: ಸಾಫ್ಟ್‌ವೇರ್ ಇಂಜಿನಿಯರ್ ಸಾವು

ಹೊಸದಿಗಂತ ವರದಿ,ಮಂಡ್ಯ:

ಮುಂದೆ ಹೋಗುತ್ತಿದ್ದ ಕ್ಯಾಂಟರ್ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಕೋಣನಹಳ್ಳಿ ಬಳಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಿವಾಸಿ ಸಾಫ್ಟ್‌ವೇರ್ ಎಂಜಿನಿಯರ್ ಅಶ್ವಿನಿ (33) ಮೃತಪಟ್ಟರು. ಆಕೆಯ ಪತಿ ಸ್ಟ್ಾವೇರ್ ಎಂಜಿನಿಯರ್ ಶ್ರೀಕಾಂತ್ (37) ಮತ್ತು 2 ವರ್ಷದ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರವಾಸ ಮುಗಿಸಿಕೊಂಡು ಮೈಸೂರಿನಿಂದ ಬೆಂಗಳೂರು ಕಡೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಶ್ರೀಕಾಂತ್ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದವರು. ಕೆಲಸದ ನಿಮಿತ್ತ ಪ್ರಸ್ತುತ ಬೆಂಗಳೂರು ನಗರದಲ್ಲಿ ವಾಸವಾಗಿದ್ದಾರೆ.
ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!