ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಡಬಗೆರೆ ಬ್ರಿಡ್ಜ್ ಬಳಿ ಸಿಮೆಂಟ್ ಬಲ್ಕರ್ ಗೆ ಕಾರು ಡಿಕ್ಕಿ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಂದೆ ಗುರುರಾಜು (35) ಮತ್ತು ಮಗ ರಿಶಾಂಕ್ (2) ಸಾವನ್ನಪ್ಪಿದ್ದು, ಪತ್ನಿ ಹರ್ಷಿತಾ ಅವರನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಟುಂಬ ಸಮೇತರಾಗಿ ಗದಗ ಜಿಲ್ಲೆಯ ಮುಂಡರಗಿಯಿಂದ ಬೆಂಗಳೂರಿಗೆ ಕ್ವಿಡ್ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ. ಕಡಬಗೆರೆ ಸೇತುವೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾಂಕ್ರೀಟ್‌ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.