ಕೆನಡಾದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ: ನಾಲ್ವರು ಭಾರತೀಯರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆನಡಾದ ಟೊರೊಂಟೊ ಬಳಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿ ಉರಿದ ಪರಿಣಾಮ ನಾಲ್ವರು ಭಾರತೀಯರು ಸಾವಿಗೀಡಾಗಿದ್ದಾರೆ.

ಮೃತಪಟ್ಟವರನ್ನು ಗುಜರಾತ್‌ನ ಗೋಧ್ರಾ ಮೂಲದ ಕೇತಾ ಗೋಹಿಲ್ (30) ಮತ್ತು ನಿಲ್ ಗೋಹಿಲ್ (26) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇವರ ಇಬ್ಬರು ಸ್ನೇಹಿತರು ಸಹ ಸಾವಿಗೀಡಾಗಿದ್ದಾರೆ. ಕಾರಿನಲಿದ್ದ ಓರ್ವ ಮಹಿಳೆಯನ್ನು ಬೇರೆ ವಾಹನದಲ್ಲಿದ್ದ ಪ್ರಯಾಣಿಕರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಕೆ ಪ್ರಾಣಪಾಯದಿಂದ ಪಾರಾಗಿದ್ದಾಳೆ .

ಅಪಘಾತದಲ್ಲಿ ಸಿಲುಕಿದವರನ್ನು ರಕ್ಷಿಸಲು ಹಲವಾರು ಜನ ತಮ್ಮ ಕಾರುಗಳು ನಿಲ್ಲಿಸಿ ಅಪಘಾತಕ್ಕೀಡಾದ ಕಾರಿನ ಗಾಜುಗಳನ್ನು ಒಡೆದಿದ್ದಾರೆ. ಅಷ್ಟರಲ್ಲಾಗಲೇ ನಾಲ್ವರು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!