ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 7 ಮಂದಿ ಮೃತಪಟ್ಟಿದ್ದಾರೆ.
ಇಂದು ಬೆಳಗಿನ ಜಾವ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ 7 ಮಂದಿಯಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬ ವ್ಯಕ್ತಿ ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಮೃತರೆಲ್ಲರೂ ಶಹಪುರದವರಾಗಿದ್ದು, ಬೆಂಗಳೂರಿನಿಂದ ಹೊಸಪೇಟೆಗೆ ತೆರಳುತ್ತಿದ್ದರು ಎನ್ನುವ ಮಾಹಿತಿ ದೊರಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.