ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಐವರು ನೇಪಾಳಿ ಪ್ರಜೆಗಳು ಸಾವಿಗೀಡಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿದೆ. ಎಲ್ಲರೂ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಪ್ರಯಾಗ್‌ರಾಜ್‌ನಿಂದ ಹಿಂತಿರುಗುತ್ತಿದ್ದರು. ಮಧುಬನಿ ಚತುಷ್ಪಥ ಬೈಪಾಸ್‌ನಲ್ಲಿ ವೇಗವಾಗಿ ಬಂದ ಎಸ್‌ಯುವಿ, ಬೈಕರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಈ ಅವಗಢ ಸಂಭವಿಸಿದೆ ಎನ್ನಲಾಗಿದೆ.