ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಬಳಿ ಹೆದ್ದಾರಿಯಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಾಲಕರಾದ ವಿನಯ್ (27) ಮತ್ತು ಚೆನ್ನಬಸವ (28) ಮೃತಪಟ್ಟವರು. ಅಪಘಾತದಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ